Tuesday, January 25, 2022

ಮಹಾ ಸರ್ಕಾರಕ್ಕೆ ಸುಪ್ರೀಂನಿಂದ ತಾತ್ಕಾಲಿಕ ರಿಲೀಫ್

Follow Us

ನವದೆಹಲಿ: ಮಹಾರಾಷ್ಟ್ರ ಸಿಎಂ ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್  ನೀಡಿದೆ.ರಾತ್ರೋರಾತ್ರಿ ದಿಢೀರ್ ರಾಷ್ಟ್ರಪತಿ ಆಡಳಿತ ಹಿಂಪಡೆದು, ಬಿಜೆಪಿ-ಎನ್ ಸಿ ಪಿ ಪಕ್ಷದ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲರ ನಿಲುವನ್ನು ಕಾಂಗ್ರೆಸ್, ಶಿವಸೇನೆ ಹಾಗೂ ಎನ್ ಸಿ ಪಿ ಪಕ್ಷಗಳು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವುಈ ಕುರಿತಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ತುರ್ತು ವಿಚಾರಣೆ ಕೈಗೆತ್ತಿಕೊಂಡಿತು. ವಾದ ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಸದ್ಯಕ್ಕೆ ಸರ್ಕಾರ ಬಹುಮತ ಸಾಬೀತುಪಡಿಸುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಫಡ್ನವೀಸ್ ಸರ್ಕಾರ ರಚಿಸಲು ಅವಕಾಶ ಕೊಟ್ಟಿದ್ದು ಅಸಂವಿಧಾನಿಕವಾಗಿದೆ. ನಾಳೆ ಬೆಳಗ್ಗೆ 10.30ರ ಒಳಗಾಗಿ ಸುಪ್ರೀಂ ಕೋರ್ಟ್ ಗೆ ಉತ್ತರಿಸುವಂತೆ ಕಾಂಗ್ರೆಸ್, ಶಿವಸೇನೆ, ಎನ್ ಸಿ ಪಿ ಹಾಗೂ ಬಿಜೆಪಿ ಪಕ್ಷಗಳಿಗೆ ನೊಟೀಸ್ ನೀಡುವ ಮೂಲಕ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.ರಾಜ್ಯಪಾಲರ ನಡೆ ಸರಿಯೋ ತಪ್ಪೋ ಎಂಬ ಬಗ್ಗೆ ನಿರ್ಧರಿಸಬೇಕಿದೆ. ನಾಳೆ ಬೆಳಗ್ಗೆ 10.30ರೊಳಗೆ ಸರ್ಕಾರ ರಚನೆಗೆ ಹಕ್ಕುಮಂಡನೆ ಪತ್ರ ಮತ್ತು ರಾಜ್ಯಪಾಲರು ಆಹ್ವಾನಿಸಿದ ಪತ್ರವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕು ಎಂದು ಹೇಳಿತು. ಅಲ್ಲದೇ ನಾಳೆ 10.30ರ ನಂತರ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತದೊಂದಿಗೆ ಧಾರ್ಮಿಕ ಪ್ರವಾಸೋದ್ಯಮಕ್ಕೆ ಪಾಕ್ ಪ್ರಸ್ತಾವ

newsics.com ಇಸ್ಲಾಮಾಬಾದ್‌(ಪಾಕಿಸ್ತಾನ): ಭಾರತದ ಜತೆ ಧಾರ್ಮಿಕ ಪ್ರವಾಸೋದ್ಯಮ ಆರಂಭಿಸುವ ಕುರಿತು ಪ್ರಧಾನಿ ಇಮ್ರಾನ್‌ ಖಾನ್‌ ಆಡಳಿತ ಪಕ್ಷದ ಪ್ರಮುಖ ಹಿಂದೂ ಸಂಸದರೊಬ್ಬರು ಮಂಗಳವಾರ ಪ್ರಸ್ತಾವ ಸಲ್ಲಿಸಿದ್ದಾರೆ. ಈ...

ರಾಜ್ಯದ ಐವರಿಗೆ ಪದ್ಮಶ್ರೀ ಪ್ರಶಸ್ತಿ

newsics.com ನವದೆಹಲಿ: ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. 2022ನೇ ಸಾಲಿನ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ನಾಲ್ವರು ಸಾಧಕರಿಗೆ ಪದ್ಮವಿಭೂಷಣ, 17...

ರಾಜ್ಯದಲ್ಲಿ 41,400 ಮಂದಿಗೆ ಕೊರೋನಾ, 53,093 ಜನ ಗುಣಮುಖ, 52 ಸೋಂಕಿತರು ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ(ಜ.25) ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ‌. ಕೊರೋನಾ ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಬೆಂಗಳೂರಿನಲ್ಲಿ 19,105 ಮಂದಿಗೆ...
- Advertisement -
error: Content is protected !!