Saturday, November 27, 2021

ಮಾಜಿ ರಾಜ್ಯಪಾಲ ಹನ್ಸ್ ರಾಜ್ ಭಾರದ್ವಾಜ್ ನಿಧನ

Follow Us

ನವದೆಹಲಿ: ಕರ್ನಾಟಕ ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್ ನಾಯಕ ಹನ್ಸ್ ರಾಜ್ ಭಾರದ್ವಾಜ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.  ಇವರು 2009ರಿಂದ 2014ರವರೆಗೆ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು.

ಅಲ್ಲದೇ ಹೆಚ್ಚುವರಿಯಾಗಿ 2012 ರಿಂದ 2013, ಮಾರ್ಚ್​ ವರೆಗೆ ಕೇರಳದ ರಾಜ್ಯಪಾಲರಾಗಿಯೂ ಕರ್ತವ್ಯ ನಿಭಾಯಿಸಿದ್ದರು. ಕರ್ನಾಟಕದಲ್ಲಿ ಒಟ್ಟು 4 ಮುಖ್ಯಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದ್ದರು.

ಹಂಸರಾಜ್ ಭಾರದ್ವಾಜ್ ಗಾಂಧಿ ಕುಟುಂಬಕ್ಕೆ ನಿಷ್ಠಾವಂತರಾಗಿದ್ದರು. 1982ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶ ರಾಜ್ಯವನ್ನ ಪ್ರತಿನಿಧಿಸಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಕೇಂದ್ರದಲ್ಲಿ ಅನೇಕ ಖಾತೆಗಳ ಸಚಿವರಾಗಿದ್ದರು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾರದ್ವಾಜ್ ಅವರ ಮೃತದೇಹದ ಅಂತ್ಯಕ್ರಿಯೆಯನ್ನು ದೆಹಲಿ ನಿಗಮ್ ಬೋದ್ ಘಾಟ್ ನಲ್ಲಿ ನಾಳೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಭಾರದ್ವಾಜ್ ನಿಧನಕ್ಕೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸಂತಾಪ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!