
ಶಬರಿಮಲೆ: ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಯಾತ್ರೆ ಹೊರಟಿದ್ದ ತಮಿಳುನಾಡಿದ 29 ವರ್ಷದ ಮಾತೇಶ್ವರನ್ ಎಂಬುವರು ಮಾರ್ಗಮಧ್ಯದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಯಾತ್ರೆ ವೇಳೆ ಕುಸಿದುಬಿದ್ದ ಯುವಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಆಗ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಶಬರಿಮಲೆ ಯಾತ್ರೆಗೆ ಕೇರಳ ಮಾತ್ರವಲ್ಲದೆ ನೆರೆಯ ತಮಿಳುನಾಡು, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದಾರೆ.