ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ಕರ್ನಾಟಕ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ( ಡಿಪಿಆರ್)ಯನ್ನು
ತಿರಸ್ಕರಿಸುವಂತೆ ತಮಿಳುನಾಡು ಸರ್ಕಾರ ಕೇಂದ್ರವನ್ನು ಆಗ್ರಹಿಸಿದೆ.
ತಮಿಳುನಾಡು ವಿಧಾನಸಭೆಯನ್ನು ಉದ್ದೇಶಿಸಿ ತಮ್ಮ ಸಂಪ್ರದಾಯಿಕ ಭಾಷಣದಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್,
ಅಂತರರಾಜ್ಯ ನದಿ ನೀರು ಹಂಚಿಕೆಯಲ್ಲಿ ತಮಿಳುನಾಡು ಹಿತಾಸಕ್ತಿಗಳ ರಕ್ಷಣೆಯ ಕ್ರಮಗಳನ್ನು
ತಮ್ಮ ಸರ್ಕಾರ ಮುಂದುವರಿಸಲಿದೆ ಎಂದು ಪ್ರಕಟಿಸಿದ್ದಾರೆ