ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುವುದಿಲ್ಲ ಎಂದು ಐದು ರಾಜ್ಯಗಳು ಘೋಷಿಸಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ, ಕಾನೂನು ಜಾರಿಯನ್ನು ನಿರಾಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಪಶ್ಚಿಮ ಬಂಗಾಳ, ಪಂಜಾಬ್, ಕೇರಳ, ಮಧ್ಯಪ್ರದೇಶ ಹಾಗೂ ಚತ್ತೀಸ್ ಗಡ ರಾಜ್ಯಗಳ ಮುಖ್ಯಮಂತ್ರಿಗಳು ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ -2019 ಜಾರಿಗೆ ನಿರಾಕರಿಸಿವೆ. ಆದರೆ, ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ನಿರಾಕರಿಸುವ ಅಧಿಕಾರ ರಾಜ್ಯಗಳಿಗೆ ಇಲ್ಲ. ಎಲ್ಲಾ ರಾಜ್ಯಗಳು ಕಡ್ಡಾಯವಾಗಿ ಕಾಯ್ದೆಯನ್ನು ಜಾರಿಗೊಳಿಸಲೇಬೇಕು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ರಾಜ್ಯಗಳು ಸಿಎಬಿ ಜಾರಿಗೊಳಿಸಲೇಬೇಕು; ಗೃಹ ಸಚಿವಾಲಯ
Follow Us