ಮುಂಬೈ: “ನನ್ನ ಹೆಸರು ರಾಹುಲ್ ಸಾವರ್ಕರ್ ಅಲ್ಲ, ಸತ್ಯ ನುಡಿದಿದ್ದಕ್ಕೆ ಕ್ಷಮೆ ಕೇಳಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈಗ ಸಾವರ್ಕರ್ ಕುಟುಂಬದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ರಾಹುಲ್ ಹೇಳಿಕೆ ವಿರುದ್ಧ ವೀರ್ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ.. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಯೋಧರನ್ನು ಗೌರವಿಸಲು ರಾಹುಲ್ ಗಾಂಧಿ ಕಲಿಯಬೇಕು ಎಂದು ರಂಜಿತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.