ನವದೆಹಲಿ: ದೇಶದ ವಿವಿಧ ವಿಶ್ವವಿದ್ಯಾನಿಲಯದಲ್ಲಿ ಸಿಎಎ ವಿರೋಧಿಸಿ ವಿದ್ಯಾರ್ಥಿಗಳು ಗಲಭೆಯಲ್ಲಿ ತೊಡಗುವುದುನ್ನು ನಿಲ್ಲಿಸಿದರೆ ಮಾತ್ರ ಅವರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಹಾಗೂ ಉತ್ತರ ಪ್ರದೇಶದ ಅಲಿಗಢ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದಾಳಿಗಳ ಬಗ್ಗೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ಸೋಮವಾರ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ “ಮೊದಲು ವಿದ್ಯಾರ್ಥಿಗಳು ಗಲಭೆಗಳಲ್ಲಿ ತೊಡಗುವುದನ್ನು ನಿಲ್ಲಿಸಲಿ, ಶಾಂತಿ ಕಾಪಾಡಲಿ” ಎಂದು ಸ್ಪಷ್ಟಪಡಿಸಿದ್ದಾರೆ.