ನವದೆಹಲಿ: ಅತ್ಯಾಚಾರ ಕುರಿತ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು ಬಿಜೆಪಿ ವಿಷಯಾಂತರಕ್ಕೆ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಜಾರ್ಖಂಡ್ ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ವಿವಾದಿತ ಹೇಳಿಕೆ ನೀಡಿದ್ದರು. ಮೇಕ್ ಇನ್ ಇಂಡಿಯಾ ಬದಲಾಗಿ ರೇಪ್ ಇನ್ ಇಂಡಿಯಾ ಆಗಿದೆ ಎಂದು ಟೀಕಿಸಿದ್ದರು. ಲೋಕಸಭೆಯಲ್ಲಿ ಇದು ಪ್ರತಿಧ್ವನಿಸಿ ತೀವ್ರ ಕೋಲಾಹಲ ಸೃಷ್ಟಿಸಿತ್ತು