ನವದೆಹಲಿ: ಶಬರಿಮಲೆ ಅಯ್ಯಪ್ಪನ ಸನ್ನಿಧಿ ಪ್ರವೇಶಿಸುವ ಮಹಿಳೆಯರಿಗೆ ಪೊಲೀಸ್ ರಕ್ಷಣೆ ನೀಡಬೇಕೆಂಬ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಯಾವುದೇ ತುರ್ತು ಆದೇಶ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಇದೊಂದು ಭಾವನಾತ್ಮಕ ವಿಚಾರವಾಗಿದ್ದು, ಪರಿಸ್ಥಿತಿಯು ಕೈ ಮೀರುವಂತೆ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಎಂದು ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ದೇಗುಲ ಪ್ರವೇಶಿಸಲು ಪೊಲೀಸ್ ರಕ್ಷಣೆ ಕೋರಿ ಇಬ್ಬರು ಮಹಿಳಾ ಕಾರ್ಯಕರ್ತರು ಅರ್ಜಿ ಸಲ್ಲಿಸಿದ್ದರು.