Saturday, April 17, 2021

ಸಂವಿಧಾನ ದಿನ: ವಿಶೇಷ ಸಂಸತ್ ಅಧಿವೇಶನ

ನವದೆಹಲಿ: ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 70 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ವಿಶೇಷ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಅಧಿವೇಶನವನ್ನು ಅವರು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕಲಾಪದಿಂದ ದೂರ ಉಳಿಯಲು ನಿರ್ಧಾರ ಮಾಡಿವೆ. ಸೋಮವಾರ ಇದೇ ವಿಚಾರ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಸ್ತಾಪವಾಗಿ ಕಲಾಪವನ್ನು ನುಂಗಿ ಹಾಕಿತ್ತು. ಪದೇ ಪದೇ ಗದ್ದಲ, ಕೋಲಾಹಲದ ಕಾರಣ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು.ಇಂದಿನ ವಿಶೇಷ ಅಧಿವೇಶನದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಸಹ ಭಾಗಿಯಾಗಲಿದ್ದಾರೆ.ಸಂವಿಧಾನ ದಿನದ ಅಂಗವಾಗಿ ವರ್ಷವಿಡೀ ಹಲವಾರು ಕಾರ್ಯಕ್ರಮಗಳನ್ನು ದೇಶದ ಉದ್ದಗಲಕ್ಕೂ ಹಮ್ಮಿಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!