ಮುಂಬೈ: ಖ್ಯಾತ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಲಾದ ಪೊಲೀಸ್ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಸಚಿನ್ ಅವರು ಇಲ್ಲಿಯ ತನಕ ಎಕ್ಸ್ ದರ್ಜೆಯ ಪೊಲೀಸ್ ಭದ್ರತೆ ಹೊಂದಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಭದ್ರತಾ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 45 ಗಣ್ಯರ ಭದ್ರತೆ ಕುರಿತು ಪರಿಶೀಲನೆ ನಡೆಸಲಾಗಿದ್ದು, ಬಹುತೇಕ ಬಿಜೆಪಿ ನಾಯಕರ ಭದ್ರತಾ ವ್ಯವಸ್ಥೆಯಲ್ಲಿ ಕಡಿತಮಾಡಲಾಗಿದೆ.