ಗುವಾಹಟಿ; ಪೌರತ್ವ ನಿಷೇಧ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಅಸ್ಸಾಂನಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. 26ಕ್ಕೂ ಹೆಚ್ಚಿನ ಜನರು ಗುಂಡಿನ ದಾಳಿಯಿಂದ ಗಾಯಗೊಂಡಿದ್ದಾರೆ.
ಆದರೆ, ರಾಜ್ಯದಲ್ಲಿ ಪರಿಸ್ಥಿತಿ ತಕ್ಕಮಟ್ಟಿಗೆ ತಹಬಂದಿಗೆ ಬಂದಿದ್ದರಿಂದ ಭಾನುವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆಯನ್ನು ಸಡಿಲಿಸಲಾಗಿತ್ತು.