ಪಾಟ್ನಾ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಾಯ್ದೆ ಜಾರಿಯಿಂದ ಹಿಂದೆ ಸರಿದಿದ್ದಾರೆ. ಅಷ್ಟಕ್ಕೂ ಬಿಹಾರದಲ್ಲಿ ಎನ್‌ಆರ್‌ಸಿ ಜಾರಿಗೊಳಿಸುವ ಅಗತ್ಯವೇನಿದೆ? ಎಂದು ನಿತೀಶ್ ಕುಮಾರ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಪೌರತ್ವ ತಿದ್ದುಪಡಿ ವಿಧೇಯಕವನ್ನು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸಂಸತ್ತಿನ ಉಭಯ ಸದನಗಳಲ್ಲಿ ಬೆಂಬಲಿಸಿತ್ತು.