Monday, January 24, 2022

ಸಿಎಎ ಜಾರಿ ವಿರೋಧಿಸಿದ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

Follow Us

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುವುದಿಲ್ಲ ಎಂದ ರಾಜ್ಯಗಳಿಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ಸಿಎಎ ಜಾರಿಗೆ ವಿರೋಧ ವ್ಯಕ್ತಪಡಿಸಿದ ಕೇರಳ, ತೆಲಂಗಾಣ, ಪಶ್ಚಿಮ ಬಂಗಾಳ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಿಗೆ ರವಿಶಂಕರ ಪ್ರಸಾದ್ ಈ ಎಚ್ಚರಿಕೆ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯಿಂದ ಯಾವ ರಾಜ್ಯಗಳೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಹಾಗೆ ಮಾಡಿದಲ್ಲಿ ಅದು ಸಂವಿಧಾನ ವಿರೋಧಿ ಕ್ರಮವಾಗುತ್ತದೆ ಎಂದು ತಿಳಿಸಿದ್ದಾರೆ.
ಹಲವು ರಾಜ್ಯಗಳು ಮತ ಬ್ಯಾಂಕ್ ರಾಜಕಾರಣಕ್ಕಾಗಿ ಕಾಯ್ದೆ ಅನುಷ್ಠಾಕ್ಕೆ ಹಿಂದೆ ಸರಿಯುತ್ತಿವೆ. ಇಂತಹ ರಾಜ್ಯಕ್ಕೆ ಮತ್ತೊಮ್ಮೆ ಎಚ್ಚರಿಕೆ ನೀಡುತ್ತೇವೆ. ಕಾಯ್ದೆ ಬಗ್ಗೆ ಸೂಕ್ತ ಕಾನೂನು ಸಲಹೆ ಪಡೆದುಕೊಳ್ಳಿ. ಪೌರತ್ವ ಕಾಯ್ದೆ ಜಾರಿ ಮಾಡಲು ಸಂಸತ್ತಿಗೆ ಸಂಪೂರ್ಣ ಹಕ್ಕಿದ್ದು, ಆರ್ಟಿಕಲ್ 245 ಹಾಅಗೂ 256 ಈ ಬಗ್ಗೆ ಸ್ಪಷ್ಟವಾಗಿ ಹೇಳುತ್ತದೆ.
ಸಂಸತ್ತು ರಚಿಸಿದ ಯಾವುದೇ ಕಾನೂನು ಅಮಾನ್ಯವೆಂದು ಪರಿಗಣಿಸಲು ಬರುವುದಿಲ್ಲ. ಅದು ಪ್ರಾದೇಶಿಕ ಮಾನ್ಯತೆಯನ್ನು ಒಳಗೊಂಡಿರುತ್ತದೆ. ಸಂವಿಧಾನಿಕ ನಿಬಂಧನೆಗಳ ಬಗ್ಗೆ ರಾಜ್ಯಗಳು ಕಾನೂನು ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಯಲ್ಲಿ ಹೊಡೆದಾಡಿದ ಆಶಾ ಕಾರ್ಯಕರ್ತೆಯರು!

newsics.com ಪಾಟ್ನಾ : ನವಜಾತ ಶಿಶುವಿಗೆ ಚುಚ್ಚು ಮದ್ದು ನೀಡುವ ವಿಚಾರಕ್ಕೆ  ಇಬ್ಬರು ಮಹಿಳಾ ಆಶಾ ಕಾರ್ಯಕರ್ತೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಿಹಾರದ ಜಮುಯಿ ಸರ್ಕಾರಿ ಆಸ್ಪತ್ರೆಯಲ್ಲಿ ಈ...

ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ಇಂದಿನಿಂದಲೇ ಜಾರಿ

newsics.com ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ. ಬೆಂಗಳೂರು...

ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್’ಗೆ ಕೊರೊನಾ ಸೋಂಕು

newsics.com ದೆಹಲಿ: ಎನ್​ಸಿಪಿ ಅಧ್ಯಕ್ಷ ಶರದ್​ ಪವಾರ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕು ತಗುಲಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ...
- Advertisement -
error: Content is protected !!