ನವದೆಹಲಿ: ದೇಶ ಬಹಳ ಸಂಕಷ್ಟದ ಸಮಯವನ್ನು ಎದುರಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್. ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠ, ಕಾಯಿದೆಯೊಂದು ಸಾಂವಿಧಾನಿಕ ಎಂದು ಘೋಷಿಸುವಂತೆ ಅರ್ಜಿ ಸಲ್ಲಿಸುತ್ತಿರುವುದನ್ನು ಇದೇ ಮೊದಲ ಬಾರಿ ನೋಡುತ್ತಿದ್ದೇವೆ ಎಂದು ಅಚ್ಚರಿ ವ್ಯಕ್ತಪಡಿಸಿದೆ.
ದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಶಾಂತಿ ನೆಲೆಸಬೇಕು ಎಂಬುದು ನಮ್ಮ ಆಶಯ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಸಿಎಎ ತ್ವರಿತ ವಿಚಾರಣೆ ಅಸಾಧ್ಯ- ಸುಪ್ರೀಂ ಸ್ಪಷ್ಟನೆ
Follow Us