ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಇಂದು ದೆಹಲಿಯ ರಾಜ್ ಘಾಟ್ ನಲ್ಲಿ ‘ಒಗ್ಗಟ್ಟಿಗಾಗಿ ಸತ್ಯಾಗ್ರಹ’ ಆರಂಭಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖಂಡ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ. ಇದಕ್ಕೂ ಮುನ್ನ ರಾಹುಲ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಸಂವಿಧಾನದ ಮುನ್ನುಡಿಯನ್ನು ಓದಿದರು. ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇಲ್ಲಿಯವರೆಗೆ 25 ಜನರು ಜೀವ ಕಳೆದುಕೊಂಡಿದ್ದಾರೆ.