ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಪ್ರತಿಭಟನೆ ಸಂಬಂಧ 10 ಜನರನ್ನು ಡಿಸೆಂಬರ್ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿದ್ದಾರೆ.
ಜಾಮಿಯಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ 10 ಜನರನ್ನು ಬಂಧಿಸಿದ್ದರು. ಬಂಧಿತರು ವಿದ್ಯಾರ್ಥಿಗಳಾಗಿರಲಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಸಿಎಎ ಪ್ರತಿಭಟನೆ; 10 ಆರೋಪಿಗಳಿಗೆ ನ್ಯಾಯಾಂಗ ಬಂಧನ
Follow Us