ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಉತ್ತರಪ್ರದೇಶದಲ್ಲಿ ಇಲ್ಲಿಯವರೆಗೆ 879 ಜನರನ್ನು ಬಂಧಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಶಂಕೆಯ ಮೇಲೆ 5 ಸಾವಿರನ್ನು ಕೂಡ ಬಂಧನದಲ್ಲಿರಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಜನರು ನಿಷೇಧಾಜ್ಞೆಯನ್ನೂ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ತೊಡಿಗದ್ದಾರೆ.