ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶದ ಹಲವೆಡೆ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿರುವುದರಿಂದ ಭಾನುವಾರ ಆರಂಭವಾಗಬೇಕಿದ್ದ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸ ರದ್ದಾಗಿದೆ.
ಅಸ್ಸಾಂನ ಗುವಾಹಟಿಯಲ್ಲಿ ಭಾನುವಾರ ಭಾರತ ಹಾಗೂ ಜಪಾನ್ ಪ್ರಧಾನಿಯ ಶೃಂಗಸಭೆಗೆ ನಡೆಯಬೇಕಿತ್ತು. ಆದರೆ, ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಜಪಾನ್ ಪ್ರಧಾನಿ ಪ್ರವಾಸವನ್ನು ರದ್ದುಪಡಿಸಿರುವುದಾಗಿ ತಿಳಿದುಬಂದಿದೆ.