Wednesday, May 31, 2023

ಸಿಯಾಚಿನ್ ನಲ್ಲಿ ಮತ್ತೆ ಹಿಮಪಾತ; ಇಬ್ಬರು ಯೋಧರು ಹುತಾತ್ಮ

Follow Us

ಶ್ರೀನಗರ: ಸಿಯಾಚಿನ್‌ನ ದಕ್ಷಿಣ ಭಾಗದ ಹಿಮ ಪರ್ವತ ಶ್ರೇಣಿಯಲ್ಲಿ ಹಿಮಪಾತ ಸಂಭವಿಸಿ ಮತ್ತಿಬ್ಬರು ಯೋಧರು ಹುತಾತ್ಮರಾಗಿದ್ದಾರೆ.18,000 ಅಡಿ ಎತ್ತರದಲ್ಲಿ ಯೋಧರು ಗಸ್ತು ತಿರುಗುತ್ತಿದ್ದಾಗ  ಹಿಮಪಾತ ಸಂಭವಿಸಿದ್ದು, ಕೂಡಲೇ ವೈದ್ಯರ ತಂಡ ಕಾರ್ಯಾಚರಣೆ ನಡೆಸಿ ಗಾಯಾಳು ಯೋಧರನ್ನು ರಕ್ಷಿಸಿತು. ಆದರೆ ಇಬ್ಬರು ಯೋಧರನ್ನು ಬದುಕುಳಿಸಿಕೊಳ್ಳುವಲ್ಲಿ ಸಾಧ್ಯವಾಗಲಿಲ್ಲ ಎಂದು ಸೇನೆ ಮೂಲಗಳು ತಿಳಿಸಿವೆ.ಕಳೆದ ಹದಿನೈದು ದಿನದಲ್ಲಿ ಸಿಯಾಚಿನ್‌ನಲ್ಲಿ ನಡೆದ ಎರಡನೇ ಹಿಮಪಾತ ಇದಾಗಿದ್ದು, ನ.18ರಂದು ಸಿಯಾಚಿನ್‌ ಉತ್ತರ ಭಾಗದ ಕಾರಕೋರಂ ಪರ್ವತ ಶ್ರೇಣಿಯಲ್ಲಿ ಹಿಮಪಾತ ಸಂಭವಿಸಿತ್ತು. ಘಟನೆಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಇಬ್ಬರು ನಾಗರಿಕರು ಮೃತಪಟ್ಟಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ...

ಇಂದು ಏಕಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...

ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
- Advertisement -
error: Content is protected !!