ನವದೆಹಲಿ: ತನ್ನ ಸಹೋದ್ಯೋಗಿ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿರುವ ಆರೋಪಿಯೊಬ್ಬ ವಿಚಾರಣೆ ಸಂದರ್ಭದಲ್ಲಿ ಹೆಣ್ಣಿನ ವೇಷ ಧರಿಸಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ತನ್ನ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಮಾಡಬೇಕು ಎಂದು ಆತ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾನೆ. ಆದರೆ ಈ ಮನವಿಯನ್ನು ದೆಹಲಿ ಹೈಕೋರ್ಟ್ ತಳ್ಳಿಹಾಕಿದೆ. ತಾನು ಲಿಂಗಪರಿವರ್ತನೆ ಮಾಡುತ್ತಿದ್ದು, ಇದರ ಪ್ರಕ್ರಿಯೆ ಮುಂದುವರಿದಿದೆ ಎಂದು ಆತ ನ್ಯಾಯಾಲಯದಲ್ಲಿ ಹೇಳಿದ್ದಾನೆ.