ಸಿರೋಹಿ: ಬಾಲಕಿಯರ ಮೇಲೆ ನಡೆದಿರುವ ರಕ್ಕಸೀ ಕೃತ್ಯಗಳು ದೇಶದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸಿದೆ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಶುಕ್ರವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜಸ್ತಾನದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಬಗ್ಗೆ ಗೌರವವನ್ನು ಮೂಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.