ತಿರುಪತಿ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಭಕ್ತರು ದಾಖಲೆ ಸಂಖ್ಯೆಯಲ್ಲಿ ಸೇರಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದಾರೆ. 14 ಗಂಟೆ ದೇವರ ದರ್ಶನಕ್ಕೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನವರಿ 7ರ ವರೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆ ಹೆಚ್ಚಾಗಿದೆ.