ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹತ್ತು ವರ್ಷಗಳ ಅವಧಿಗೆ ವಿಸ್ತರಿಸುವ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯಿತು.
ಸಂವಿಧಾನ (126ನೇ ತಿದ್ದುಪಡಿ ಮಸೂದೆ) 2019 ಮಸೂದೆಯನ್ನು ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಮಂಡಿಸಿದರು. ಮಸೂದೆ ಮೂರನೇ ಎರಡರಷ್ಟು ಮತಗಳಿಂದ ಅನುಮೋದನೆಗೊಂಡಿತು.