ಕರಿಪುರಂ: ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಕೇಂದ್ರ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದೆ. ಗಂಭೀರವಾಗಿ ಗಾಯಗೊಂಡಿರುವವರಿಗೆ ಎರಡು ಲಕ್ಷ ರೂಪಾಯಿ ನೀಡಲಿದೆ. ಸ್ವಲ್ಪ ಗಾಯವಾದವರಿಗೆ 50,000 ರೂಪಾಯಿ ನೆರವಿನ ಘೋಷಣೆ ಮಾಡಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಇದನ್ನು ಪ್ರಕಟಿಸಿದ್ದಾರೆ.
ಇದೇ ವೇಳೆ ಕೇರಳ ಸರ್ಕಾರ ಕೂಡ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಧನ ನೀಡುವುದಾಗಿ ಹೇಳಿದೆ. ಗಾಯಾಳುಗಳ ಎಲ್ಲ ಚಿಕಿತ್ಸೆ ವೆಚ್ಚ ಭರಿಸುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಜತೆಗೆ ಇಂದು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಅವರ ಯೋಗ ಕ್ಷೇಮ ವಿಚಾರಿಸಿದರು. ಸರ್ಕಾರ ಎಲ್ಲ ನೆರವು ನೀಡಲಿದೆ ಎಂದು ತಿಳಿಸಿದರು.
ಈ ಮಧ್ಯೆ ಕೇರಳದ ಇಡುಕ್ಕಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ತಲುಪಿದೆ. ಇದು ಐದು ಮಂದಿಯ ಮೃತದೇಹಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ