Monday, April 12, 2021

ಕಾಸರಗೋಡಿನಲ್ಲಿ ಮತ್ತೆ 10 ಮಂದಿಗೆ ಕೊರೋನಾ ಸೋಂಕು

ಕಾಸರಗೋಡು: ಕೇರಳದಲ್ಲಿ ಇಂದು ಹೊಸದಾಗಿ 61 ಕೊರೋನಾ ಪ್ರಕರಣ ವರದಿಯಾಗಿದೆ. ಕಾಸರಗೋಡಿನಲ್ಲಿ 10 ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ. 61 ಮಂದಿಯಲ್ಲಿ 37 ಮಂದಿ ಇತರ ರಾಜ್ಯಗಳಿಂದ ಕೇರಳಕ್ಕೆ  ಹಿಂತಿರುಗಿದವರಾಗಿದ್ದಾರೆ. 20 ಮಂದಿ ವಿದೇಶಗಳಿಂದ ಬಂದವರಾಗಿದ್ದಾರೆ. ಕೇರಳದ ಆಸ್ಪತ್ರೆಗಳಲ್ಲಿ 670 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 15 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ. ಕೇರಳದಲ್ಲಿ ಪಾಲಕ್ಕಾಡ್ ಜಿಲ್ಲೆಯಲ್ಲಿ ಅತೀ ಹೆಚ್ಚು 12 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಕೂಡ ಗಡಿ ಜಿಲ್ಲೆಯಾಗಿದ್ದು ತಮಿಳುನಾಡು ಜತೆ ಗಡಿ ಹಂಚಿಕೊಂಡಿದೆ. ಕಾಸರಗೋಡಿನಲ್ಲಿ  ಕೊರೋನಾ ಪ್ರಕರಣ ಹೆಚ್ಚಾಗಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಕರ್ನಾಟಕ ಗಡಿಯಲ್ಲಿ ವೈದ್ಯಕೀಯ ತಪಾಸಣೆ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!