newsics.com
ಮುಂಬೈ: ದೇಶದಲ್ಲಿ ಮೊದಲ ಬಾರಿಗೆ ವನ್ಯ ಜೀವಿಗಳ ಸಂರಕ್ಷಣೆ ನಿಟ್ಟಿನಲ್ಲಿ ಮುಂದಿನ 10 ವರ್ಷಗಳ ಕ್ರಿಯಾ ಯೋಜನೆಗೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ ನೀಡಿದೆ. ಇತ್ತೀಚೆಗೆ ನಡೆದ ಮಹಾರಾಷ್ಟ್ರ ವನ್ಯ ಜೀವಿ ಮಂಡಳಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ರಾಜ್ಯದ ಅಭಯಾರಣ್ಯಗಳಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ.
ಹಂತ ಹಂತವಾಗಿ ವೈಜ್ಞಾನಿಕ ಮಾದರಿಯಲ್ಲಿ ಈ ಅಪಾಯ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳನ್ನು ಈ ಯೋಜನೆ ಒಳಗೊಂಡಿದೆ. ಮಹಾರಾಷ್ಟ್ರದ ಅಭಯಾರಣ್ಯಗಳಲ್ಲಿ ಹುಲಿಗಳು ಹೆಚ್ಚಿನ ಸಂಖ್ಯೆಯಲ್ಲಿದೆ.
ಇತ್ತೀಚೆಗೆ ನಾಸಿಕ್ ಅರಣ್ಯ ವಲಯದಲ್ಲಿ ಗಾಯಗೊಂಡಿದ್ದ ಚಿರತೆಯೊಂದನ್ನು ಅರಣ್ಯಾಧಿಕಾರಿಗಳು ಪತ್ತೆ ಹಚ್ಚಿ ಚಿಕಿತ್ಸೆ ನೀಡಿದ್ದರು.