ತಿರುವನಂತಪುರಂ: ಕೇರಳದಲ್ಲಿ ಮಾರಕ ಕೊರೋನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಶುಕ್ರವಾರ ಕೇರಳದಲ್ಲಿ ಹೊಸದಾಗಿ 2988 ಕೊರೋನಾ ಸೋಂಕು ದೃಢಪಟ್ಟಿದೆ. ಒಂದೇ ದಿನ 14 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಕಾಸರಗೋಡಿನಲ್ಲಿ ಕೂಡ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಕಳೆದ 24 ಗಂಟೆಯಲ್ಲಿ 102 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ರೋಗ ವ್ಯಾಪಕವಾಗಿದೆ.
ಕೇರಳದಲ್ಲಿ ಕೊರೋನಾ ಸೋಂಕಿತ 27, 877 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ 73, 904 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.