newsics.com
ತಿರುವನಂತಪುರಂ: ಕೇರಳದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 18,582 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿತರಾಗಿದ್ದ 20,089 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ 102 ಮಂದಿ ಮೃತಪಟ್ಟಿದ್ದಾರೆ.
ಕೇರಳದಲ್ಲಿ ಕೊರೋನಾ ಟೆಸ್ಟ್ ನಡೆಸಲಾದ ಒಟ್ಟು ಮಂದಿಯಲ್ಲಿ ಶೇಕಡ 15. 11 ಜನರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿದೆ.
ಕೇರಳದಲ್ಲಿ 1, 78, 630 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾದಿಂದ ಕೇರಳದಲ್ಲಿ ಇದುವರೆಗೆ 18 601 ಮಂದಿ ಮೃತಪಟ್ಟಿದ್ದಾರೆ.