Thursday, June 17, 2021

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com

ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ.

ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ ಸೇರಿದಂತೆ ಒಂದೇ ಕೊಠಡಿಯಲ್ಲಿ ಜೀವಿಸುತ್ತಿದ್ದಾರೆ. ಇಲ್ಲಿ ಕೊರೋನಾ ಸೋಂಕಿಗೆ ಒಳಗಾದರೆ ಐಸೋಲೇಷನ್ಗೆ ಒಳಗಾಗಲು ಯಾವುದೇ ಸೌಲಭ್ಯ ಇಲ್ಲ.

ಇದನ್ನು ಅರಿತು 18 ವರ್ಷದ ವಿದ್ಯಾರ್ಥಿ ಶಿವ ತನ್ನ ನಿವಾಸದ ಕಾಂಪೌಂಡ್ ನಲ್ಲಿರುವ ಮರದ ಮೇಲೆ ಬಿದಿರಿನಿಂದ ಕೋವಿಡ್ ‘ವಾರ್ಡ್’ ನಿರ್ಮಿಸಿ ಅಲ್ಲೇ 11 ದಿನಗಳ ಕಾಲ ಐಸೋಲೇಷನ್ಗೆ ಒಳಗಾಗಿದ್ದಾನೆ.

ನಲಗೊಂಡ ಜಿಲ್ಲೆಯ ಬುಡಕಟ್ಟು ಕುಗ್ರಾಮ ಕೊತ್ತನಂದಿಕೊಂಡದಲ್ಲಿ ವಾಸಿಸುತ್ತಿರುವ ಶಿವ ಅವರಿಗೆ ಮೇ 4ರಂದು ಕೊರೋನಾ ಸೋಂಕು ದೃಢಪಟ್ಟಿತ್ತು. ಕೊತ್ತನಂದಿಕೊಂಡದಲ್ಲಿ 350 ಕುಟುಂಬಗಳು ವಾಸಿಸುತ್ತಿವೆ.

ರಾಜ್ಯದ ಗ್ರಾಮೀಣ ಭಾಗದಲ್ಲಿ ಕೂಡ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮೇ 13ರಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಾಸ್ಟೆಲ್ ಅನ್ನು ಐಸೋಲೇಷನ್ ಕೇಂದ್ರವಾಗಿ ಪರಿವರ್ತಿಸಿತ್ತು.

ಇಲ್ಲಿ ಐಸೋಲೇಷನ್ ಕೇಂದ್ರಗಳಿಲ್ಲ. ಎರಡು ದಿನಗಳ ಹಿಂದೆ ಎಸ್ಟಿ ಹಾಸ್ಟೆಲ್ ಅನ್ನು ಐಸೋಲೇಷನ್ ಕೇಂದ್ರವಾಗಿ ಪರಿವರ್ತಿಸಲಾಯಿತು. ಇತರ ಗ್ರಾಮಗಳಲ್ಲಿ ಇಂತಹ ಕೇಂದ್ರಗಳು ಇವೆ ಎಂಬುದೇ ನನಗೆ ತಿಳಿದಿರಲಿಲ್ಲ. ಹೀಗಾಗಿ ನಾನು ಐಸೋಲೇಷನ್ ಗೆ ಮರವನ್ನೇ ಆಶ್ರಯಿಸಿದೆ ಎಂದು ಹೇಳಿದ್ದಾನೆ.

ಏನಿದು ಲಸಿಕೆ ಪಾಸ್‌ಪೋರ್ಟ್‌?

ಏನಿದು ಲಸಿಕೆ ಪಾಸ್‌ಪೋರ್ಟ್‌?

ಗ್ರಾಮೀಣ ಪ್ರದೇಶದಲ್ಲೂ‌ ಕೊರೋನಾ‌ ಅಬ್ಬರ: ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಮತ್ತಷ್ಟು ಸುದ್ದಿಗಳು

Latest News

ಹೊಸನಗರ ತಾಲೂಕಲ್ಲಿ ದಾಖಲೆಯ ಮಳೆ, ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಲಿಂಗನಮಕ್ಕಿ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಮಳೆಯಾಗಿದ್ದು, ದಾಖಲೆಯ 33 ಸೆಂಟಿ ಮೀಟರ್ ಮಳೆ ಸುರಿದಿದೆ. ಹೊಸನಗರ ತಾಲೂಕಿನಾದ್ಯಂತ ಬುಧವಾರ ಒಂದೇ ದಿನ...

ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ‌ ಸ್ವರಾ, ಟ್ವಿಟರ್ ಎಂಡಿ‌ ವಿರುದ್ಧ ದೂರು

newsics.com ನವದೆಹಲಿ: ಗಾಜಿಯಾಬಾದ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಮತ್ತಿತರರ ವಿರುದ್ಧ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ...

ಜುಲೈ 31ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ

newsics.com ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಜುಲೈ 31ರೊಳಗೆ ಪ್ರಕಟವಾಗಲಿದೆ. ಗುರುವಾರ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಗೆ ಈ‌ ಮಾಹಿತಿ ನೀಡಿದೆ. ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್ಇಗೆ 10,...
- Advertisement -
error: Content is protected !!