Thursday, December 8, 2022

12 ಕೋಟಿ ದರೋಡೆ ಮಾಡಿ ಬುರ್ಕಾ ಧರಿಸಿ ಓಡಾಡುತ್ತಿದ್ದ ಆರೋಪಿ ಬಂಧನ

Follow Us

newsics.com

ಮುಂಬೈ: ಪ್ರತಿಷ್ಟಿತ ಖಾಸಗಿ ಬ್ಯಾಂಕ್ ನಿಂದ 12 ಕೋಟಿ ರೂಪಾಯಿ ಅಪಹರಿಸಿದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಲ್ತಾಫ್ ಶೇೇಖ್ ಎಂದು ಗುರುತಿಸಲಾಗಿದೆ.

ಐಸಿಐಸಿಐ ಬ್ಯಾಂಕ್ ನಲ್ಲಿ ಕಸ್ಟಡಿಯನ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಬ್ಯಾಂಕ್ ನ ಸೇಫ್ ಲಾಕರ್ ನಿಂದ 12 ಕೋಟಿ ರೂಪಾಯಿ ಅಪಹರಿಸಿ ಪರಾರಿಯಾಗಿದ್ದ.  ಥಾಣೆಯ ಮನ್ ಪಾಡ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು.

ಎರಡೂವರೆ ತಿಂಗಳ ಹಿಂದೆ ವರದಿಯಾಗಿದ್ದ ಈ ಘಟನೆ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದ. ಗುರುತು ಪತ್ತೆಯಾಗದಿರಲು ಬುರ್ಕಾ ಧರಿಸಿ ಓಡಾಡುತ್ತಿದ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಮುಂಬೈ ಮತ್ತು ಥಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. 9 ಕೋಟಿ ರೂಪಾಯಿ ವಶಪಡಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!