Saturday, April 17, 2021

24 ಗಂಟೆಯಲ್ಲಿ 122 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಮಹಾಮಾರಿಯಿಂದ 122 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಸಾವಿನ ಸಂಖ್ಯೆ 2415ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ 3,525 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ಈ ಪೈಕಿ 24,386 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನಂತರ ಗುಜರಾತ್, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ತಾನದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಭಾರತದಲ್ಲಿ ಕೊರೋನಾ ಸಾವಿನ ಪ್ರಮಾಣ ಈಗ ಶೇ. 3.2 ರಷ್ಟು ಇದ್ದು, ಚೇತರಿಕೆಯ ಪ್ರಮಾಣ ಶೇ. 32.8 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!