newsics.com
ನವದೆಹಲಿ: ಅಪ್ಘಾನಿಸ್ತಾನದಲ್ಲಿ ತಾಲಿಬಾನ್ ಗಳು ನಿಯಂತ್ರಣ ಸಾಧಿಸಿರುವ ಹಿನ್ನೆಲೆಯಲ್ಲಿ ಭಾರತ ಕಾಬೂಲ್ ನಿಂದ 129 ತನ್ನ ನಾಗರಿಕರನ್ನು ಏರ್ ಲಿಫ್ಟ್ ಮಾಡಿದೆ.
ಏರ್ ಇಂಡಿಯಾ ಎ1244 ವಿಮಾನದಲ್ಲಿ 129 ಭಾರತೀಯರು ಸ್ವದೇಶಕ್ಕೆ ಆಗಮಿಸಿದ್ದಾರೆ.
ಏರ್ ಇಂಡಿಯಾ ವಿಮಾನ ನವದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಮಕ್ಕಳು ಮತ್ತು ಮಹಿಳೆಯರು ಇದರಲ್ಲಿ ಸೇರಿದ್ದಾರೆ. ಅಪ್ಘಾನಿಸ್ತಾನದಲ್ಲಿ 1500 ಭಾರತೀಯರು ಇದ್ದಾರೆ ಎಂದು ಅಂದಾಜಿಸಲಾಗಿದೆ. ಕೆಲವು ಮೂಲ ಸೌಕರ್ಯ ಯೋಜನೆಗಳಲ್ಲಿ ಭಾರತೀಯ ಕಾರ್ಮಿಕರು ತಮ್ಮನ್ನು ತೊಡಗಿಸಿಕೊಂಡಿದ್ದರು.
ತಾಲಿಬಾನ್ ಉಗ್ರರು ಭಾರತೀಯರನ್ನು ಅಪಹರಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಈ ಹಿಂದೆ ಸರ್ಕಾರಕ್ಕೆ ಎಚ್ಚರಿಕೆ ಕೂಡ ನೀಡಿದ್ದವು.