Tuesday, April 13, 2021

ಮಹಾರಾಷ್ಟ್ರದಲ್ಲಿ 1338 ಪೊಲೀಸರಿಗೆ ಕೊರೋನಾ ಸೋಂಕು, 12 ಮಂದಿ ಬಲಿ

ಮುಂಬೈ:  ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾದಿಂದ ಪೊಲೀಸ್ ಇಲಾಖೆ ತತ್ತರಿಸಿದೆ. ಇದುವರೆಗೆ 1338 ಪೊಲೀಸ್ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮುಂಬೈನಲ್ಲಿ ಅತೀ ಹೆಚ್ಚು ಪೊಲೀಸರು ಸೋಂಕಿಗೆ ಒಳಗಾಗಿದ್ದಾರೆ.  ಇವರಲ್ಲಿ 948 ಪೊಲೀಸ್ ಸಿಬ್ಬಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ  ಕೊರೋನಾಕ್ಕೆ ಬಲಿಯಾದ ಪೊಲೀಸರ ಸಂಖ್ಯೆ 12ಕ್ಕೆ ಏರಿದೆ. ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಕೊರೋನಾಕ್ಕೆ 140 ಮಂದಿ ಬಲಿಯಾಗಿದ್ದು, ಅದರಲ್ಲಿ  76 ಮಂದಿ ಮಹಾರಾಷ್ಟ್ರದವರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಇದುವರೆಗೆ  37, 136 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಮುಂಬೈ ಮಹಾನಗರದಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಮುಂಬೈಯಲ್ಲಿ ನಿರ್ಬಂಧಿತ ಪ್ರದೇಶ ಹೆಚ್ಚಿನ ಸಂಖ್ಯೆಯಲ್ಲಿದೆ. ಇಲ್ಲಿಗೆ ಪದೇ ಪದೇ ಭೇಟಿ ನೀಡಿದ ಕಾರಣ ಪೊಲೀಸರಿಗೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!