ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದಾರೆ. ದುಬೈನಿಂದ ಬಂದ ಇಬ್ಬರು ಪ್ರಯಾಣಿಕರಿಂದ 14 ಕಿಲೋ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು ಆರು ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದು ಇತ್ತೀಚಿನ ದಿನಗಳಲ್ಲಿ ವಶಪಡಿಸಿಕೊಳ್ಳಲಾದ ಅತ್ಯಂತ ಬೃಹತ್ ಪ್ರಮಾಣದ ಚಿನ್ನವಾಗಿದೆ.