ತಿರುಮಲ: ತಿರುಪತಿ ತಿರುಮಲ ದೇವಸ್ಥಾನದ 14 ಅರ್ಚಕರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ಟಿಟಿಡಿಯ ಆಡಳಿತಾಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಈ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಈ ಸಂಬಂಧ ಆರೋಗ್ಯಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಕಳೆದ ವಾರ ತಿರುಪತಿ ತಿರುಮಲದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಶೇಷ ಭದ್ರತಾಪಡೆ ಸಿಬ್ಬಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ತಿರುಮಲದಲ್ಲಿ ಕೂಡ ಕೊರೋನಾ ಇದೀಗ ವ್ಯಾಪಕವಾಗಿ ಹರಡುತ್ತಿರುವುದು ದೃಢಪಟ್ಟಿದೆ.
ಅರ್ಚಕರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ತಿರುಮಲದಲ್ಲಿ ವ್ಯಾಪಕ ಶುಚಿತ್ವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.