newsics.com
ಪುಣೆ: ಹಚ್ಚು ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಪುಣೆಯ ಬಿಬ್ವೆವಾಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಆರೋಪಿ ರಿಷಿಕೇಶ್ ಭಾಗ್ವತ್ ನನ್ನು ಇದೀಗ ಬಂಧಿಸಲಾಗಿದೆ. ಆರೋಪಿ ತನ್ನನ್ನು ಪ್ರೀತಿಸುವಂತೆ ಬಾಲಕಿಯೊಬ್ಬಳಿಗೆ ಪೀಡಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಇದನ್ನು ಬಾಲಕಿ ನಿರಾಕರಿಸಿದ್ದಕ್ಕೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಕರಣ ಸಂಬಂಧ ಇನ್ನೂ ಮೂವರು ಅಪ್ರಾಪ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಡಿಸಿಪಿ ನಮ್ರತಾ ಪಾಟೀಲ್ ತಿಳಿಸಿದ್ದಾರೆ. ಆರೋಪಿಯನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ.