ತಿರುವನಂತಪುರಂ: ಕೇರಳದಲ್ಲಿ ಸತತ ಎರಡನೆ ದಿನ ಒಂದೇ ದಿನದಲ್ಲಿ 4000ಕ್ಕಿಂತ ಹೆಚ್ಚು ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಹೊಸದಾಗಿ 4167 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ 102 ಮಂದಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ.
ಕಾಸರಗೋಡಿನಲ್ಲಿ ಕೂಡ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಕಾಸರಗೋಡಿನಲ್ಲಿ ಹೊಸದಾಗಿ 145 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಹಾವಳಿ ತೀವ್ರವಾಗಿದೆ.
ಇನ್ನೊಂದೆಡೆ ಅಂತಾರಾಜ್ಯ ಸಂಚಾರ ಸಂಬಂಧ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವುದೇ ವಿಧದ ನಿರ್ಬಂಧ ವಿಧಿಸದಂತೆ ಕೇರಳ ಸರ್ಕಾರಕ್ಕೆ ಆದೇಶ ನೀಡಿದೆ. ಇದರಿಂದ ಕಾಸರಗೋಡಿನಿಂದ ಮಂಗಳೂರಿಗೆ ತೆರಳುವ ಸಾವಿರಾರು ಮಂದಿಗೆ ಪ್ರಯೋಜನವಾಗಲಿದೆ.