Wednesday, October 5, 2022

ಉತ್ತರಪ್ರದೇಶದಲ್ಲಿ 15 ವರ್ಷದ ಬಾಲಕಿಗೆ ಬೆಂಕಿ ಹಚ್ಚಿ ಹತ್ಯೆ

Follow Us

Newsics.com

ಲಕ್ನೋ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರಿದಿದೆ. ಬಾಲಿಯಾ ಜಿಲ್ಲೆಯ ದುಬಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯನ್ನು ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ.

ಮೃತ ಪಟ್ಟ ಬಾಲಕಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದಳು ಎಂದು ವರದಿಯಾಗಿದೆ. ಮನೆಯಿಂದ ನನ್ನ ಮಗಳನ್ನು ಆಪಹರಿಸಿ ಆರೋಪಿ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ಕೃಷ್ಣ ಗುಪ್ತಾ ನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಗೆ  ಕೇವಲ 21 ವರ್ಷ ಪ್ರಾಯ.

ಇತ್ತೀಚೆಗೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಯುವತಿ ಮೃತಪಟ್ಟಿದ್ದರು. ಇದೀಗ ಸುಪ್ರೀಂ  ಕೋರ್ಟ್ ಆದೇಶದಂತೆ ಅಲಹಾಬಾದ್ ಹೈಕೋರ್ಟಿನ ಮೇಲ್ಟೋಟದಲ್ಲಿ ಹತ್ರಾಸ್ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.

ಈ ಸಂಬಂಧ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

ಹತ್ರಾಸ್ ಘಟನೆ ವಿರೋಧಿಸಿ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ ಕೂಡ ನಡೆಸಿತ್ತು.

 

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!