newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ ಸ್ಥಳದಿಂದ 100 ಮೀ ದೂರದಲ್ಲಿ ಈ ಪ್ರತಿಮೆ ಸ್ಥಾಪಿಸಲಾಗಿದೆ. ಒಮಂದುದಾರ್ ಎಸ್ಟೇಟ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಈ ಪ್ರತಿಮೆ ನಿರ್ಮಿಸಲಾಗಿದೆ.