newsics.com
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 16,103 ಕೊರೋನಾ ಸೋಂಕಿನ ಪ್ರಕರಣ ವರದಿಯಾಗಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 13, 929 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕಳೆದ ಒಂದು ದಿನದಲ್ಲಿ 31 ಮಂದಿ ಮೃತಪಟ್ಟಿದ್ದಾರೆ.
ದೇಶದ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ1,11,711ಕ್ಕೆ ತಲುಪಿದೆ.
ಪಾಸಿಟಿವಿಟಿ ದರ ಶೇಕಡ 4.27 ದಾಖಲಿಸಿದೆ