Saturday, April 17, 2021

ಕಾಸರಗೋಡಿನಲ್ಲಿ ಮತ್ತೆ 18 ಕೊರೋನಾ ಪ್ರಕರಣ

ಕಾಸರಗೋಡು: ಮಹಾರಾಷ್ಟ್ರದ ನಂಟು ಕೇರಳದಲ್ಲಿ ಆತಂಕ ಮೂಡಿಸಿದೆ. ಇಂದು ಕೇರಳದಲ್ಲಿ ಹೊಸದಾಗಿ  84 ಕೊರೋನಾ ಪ್ರಕರಣ ದೃಢಪಟ್ಟಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಅತ್ಯಧಿಕ 18 ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ.  ಇದು ಕೇರಳದಲ್ಲಿ ಒಂದೇ ದಿನ ವರದಿಯಾದ ಅತ್ಯಧಿಕ ಕೊರೋನಾ ಪ್ರಕರಣವಾಗಿದೆ.  ಈ 84 ಪ್ರಕರಣದಲ್ಲಿ  31 ಮಂದಿ ವಿದೇಶದಿಂದ ಕೇರಳಕ್ಕೆ ಹಿಂತಿರುಗಿದವರಾಗಿದ್ದಾರೆ.  48 ಮಂದಿ ಇತರ ರಾಜ್ಯಗಳಿಂದ ಬಂದವರಾಗಿದ್ದಾರೆ. ಇವರಲ್ಲಿ 39 ಮಂದಿ ಮಹಾರಾಷ್ಟ್ರ ಸಂಪರ್ಕ ಹೊಂದಿದ್ದಾರೆ. ಕೇರಳದಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದ ತೆಲಂಗಾಣದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.  ಕಾಸರಗೋಡಿನ ಬಳಿಕ ಪಾಲಕ್ಕಾಡ್ ನಲ್ಲಿ ಅತ್ಯಧಿಕ ಕೊರೋನಾ ಪ್ರಕರಣ ಇಂದು ವರದಿಯಾಗಿದ್ದು, 16 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕೇರಳದಲ್ಲಿ ಒಟ್ಟು 502 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಝಿಕೋಡ್ ಜಿಲ್ಲೆಯಲ್ಲಿ ಮೀನಿನ ವ್ಯಾಪಾರಿಯೊಬ್ಬರಲ್ಲಿ ಕೊರೋನಾ ಸೋಂಕು ಕಂಡು ಬಂದಿದ್ದು, ಈ ವ್ಯಾಪಾರಿ  ಮೀನು ಮಾರಾಟಕ್ಕಾಗಿ ಹಲವು ಪ್ರದೇಶಗಳಿಗೆ ತೆರಳಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇದೇ ವೇಳೆ ಕೊರೋನಾ ಭೀತಿಯ ಮಧ್ಯೆ ಕೇರಳದಲ್ಲಿ ಎಸ್ ಎಸ್ ಎಲ್  ಸಿ ಪರೀಕ್ಷೆ ಕೊನೆಗೊಂಡಿದ್ದು, ಸುಮಾರು ನಾಲ್ಕು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!