Tuesday, January 31, 2023

ಕೇರಳದಲ್ಲಿ ಪ್ರವಾಹ, ಭೂ ಕುಸಿತ: 18 ಜನರ ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

Follow Us

newsics.com

ತಿರುವನಂತಪುರ: ಕೇರಳದಲ್ಲಿ ಕುಂಭ ದ್ರೋಣ ಮಳೆ ಮುಂದುವರಿದಿದೆ. ದಕ್ಷಿಣ ಕೇರಳದ ಜಿಲ್ಲೆಗಳು ಮಳೆಯಿಂದ ಹೆಚ್ಚು ಹಾನಿಗೆ ಒಳಗಾಗಿವೆ. ಕೊಟ್ಟಾಯಂ,ಪತ್ತನತಿಟ್ಟ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ.

ಪ್ರವಾಹ ಮತ್ತು ಭೂ ಕುಸಿತದಲ್ಲಿ 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕೇರಳ ಸರ್ಕಾರ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದೆ.

ಕೊಟ್ಟಾಯಂ ಜಿಲ್ಲೆಯಲ್ಲಿ ಭೂ  ಕುಸಿತ ಸಂಭವಿಸಿದೆ. ಒಂದೇ ಕುಟುಂಬದ ಐದು ಮಂದಿ  ಭೂ ಕುಸಿತ ಸಂಭವಿಸಿದ ಬಳಿಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಕೇರಳದ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಯೋಧರ  ನೆರವು ಪಡೆಯಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!