ಲಕ್ನೋ: ಕನೌಜ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಬಳಿಕ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 45 ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಈ ನತದೃಷ್ಟ ಬಸ್ ಫರೂಖಾಬಾದ್ ನಿಂದ ಜೈಪುರಕ್ಕೆ ತೆರಳುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಐಜಿ ಮೋಹಿತ್ ಅಗರ್ ವಾಲ್, ಮೃತದೇಹಗಳು ಗುರುತು ಸಿಗದಷ್ಟು ಕರಕಲಾಗಿವೆ. ಈ ಹಿನ್ನೆಲೆಯಲ್ಲಿ ಗುರುತು ಪತ್ತೆ ಹಚ್ಚಲು ಡಿಎನ್ ಎ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.