ತಿರುವನಂತಪುರಂ: ಕೇರಳದಲ್ಲಿ ಸತತ ನಾಲ್ಕನೇ ದಿನ ಕೂಡ 4000ಕ್ಕಿಂತ ಹೆಚ್ಚು ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಹೊಸದಾಗಿ 4696 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. 80 ಆರೋಗ್ಯ ಕಾರ್ಯಕರ್ತರಿಗೂ ಸೋಂಕು ತಗುಲಿದೆ.
ಕೇರಳದಲ್ಲಿ ಭಾನುವಾರ ಕೊರೋನಾದಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಕಾಸರಗೋಡಿನಲ್ಲಿ ಕೊರೋನಾ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ, ಭಾನುವಾರ ಹೊಸದಾಗಿ 208 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಕೇರಳದಲ್ಲಿ ಇಂದು ಕೊರೋನಾ ಸೋಂಕಿಗೆ ತುತ್ತಾಗಿದ್ದ 2751 ಮಂದಿ ಗುಣಮುಖರಾಗಿದ್ದಾರೆ.