Tuesday, April 13, 2021

ಯೆಸ್ ಬ್ಯಾಂಕ್’ನ ರಾಣಾ ಕಪೂರ್ ಕುಟುಂಬದ 2,200 ಕೋಟಿ ರೂ. ಆಸ್ತಿ ಜಪ್ತಿ

ನವದೆಹಲಿ: ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ನ್ಯೂಯಾರ್ಕ್, ಲಂಡನ್ ಹಾಗೂ ಮುಂಬೈನಲ್ಲಿರುವ ರಾಣಾ ಕಪೂರ್ ಹಾಗೂ ಕುಟುಂಬಸ್ಥರಿಗೆ ಸೇರಿದ ಸರಿ ಸುಮಾರು 2,200 ಕೋಟಿ ರೂ. ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.
ಈ ಮಧ್ಯೆ, ಯೆಸ್ ಬ್ಯಾಂಕ್ ರಾಣಾ ಕಪೂರ್, ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಮತ್ತು ಪ್ರವರ್ತಕರಾದ ಕಪಿಲ್ ವಾಧವನ್ ಮತ್ತು ಧೀರಜ್ ವಾಧವನ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌ಶೀಟ್ ದಾಖಲಿಸಿ, ತನಿಖೆ ಮುಂದುವರೆಸಿದೆ.
ವೈಯಕ್ತಿಕ ಸಂತೃಪ್ತಿಯ ಬದಲಾಗಿ ಸಾಲಗಾರರನ್ನು ಆಯ್ಕೆ ಮಾಡಲು ಬ್ಯಾಂಕ್ ಹೆಚ್ಚಿನ ಮೌಲ್ಯದ ಸಾಲಗಳನ್ನು ವಿಸ್ತರಿಸಿದೆ ಎಂದು ಆರೋಪಿಸಲಾಗಿದೆ.
ಹಗರಣ ಕುರಿತು ಸಿಬಿಐ ಮಾರ್ಚ್ 7 ರಂದು ಪ್ರಕರಣ ದಾಖಲಿಸಿತ್ತು, ಅದು 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ ಹಗರಣಪೀಡಿತ ಡಿಎಚ್‌ಎಫ್‌ಎಲ್‌ನ ಅಲ್ಪಾವಧಿಯ ಡಿಬೆಂಚರ್‌ಗಳಲ್ಲಿ 3,700 ಕೋಟಿ ಹೂಡಿಕೆ ಮಾಡಿದೆ ಎಂದು ಹೇಳಿದೆ.
ಮಾರ್ಚ್ 9 ರಂದು ಕಪೂರ್ ಕುಟುಂಬ ಸದಸ್ಯರ ಮನೆಯಲ್ಲಿ ಹುಡುಕಾಟ ನಡೆಸಲಾಯಿತು. ಮೇ 6 ರಂದು ಇಡಿ ಮನಿ ಲಾಂಡರಿಂಗ್ ಆರೋಪದ ಮೇಲೆ ಯೆಸ್ ಬ್ಯಾಂಕ್‌ನಲ್ಲಿ ಚಾರ್ಜ್‌ಶೀಟ್ ಸಲ್ಲಿಸಿತ್ತು. ಮೋಸದ ವ್ಯವಹಾರಗಳ ಗಾತ್ರವನ್ನು, 5,050 ಕೋಟಿ ರುಪಾಯಿ ಎಂದು ಸಂಸ್ಥೆ ಅಂದಾಜಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!