Monday, April 12, 2021

ಪಾತಕಿ ದುಬೆ ಬಂಧನಕ್ಕೆ 25 ತಂಡ ರಚನೆ

ಲಕ್ನೋ: ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಬಂಧನಕ್ಕೆ ಉತ್ತರ ಪ್ರದೇಶ ಪೊಲೀಸರು 25 ತಂಡಗಳನ್ನು ರಚಿಸಿದ್ದಾರೆ. ದುಬೆ ಪರಾರಿಯಾಗಿರುವ ಹಿನ್ನಲೆಯಲ್ಲಿ ಮಧ್ಯಪ್ರದೇಶದಲ್ಲಿಯೂ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಎಂಟು ಪೊಲೀಸರನ್ನು ಹತ್ಯೆಗೈದ ಪಾತಕಿ ವಿಜಯ್ ದುಬೆ ಬಂಧನಕ್ಕಾಗಿ 40 ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ಒಳಗೊಂಡ 25 ತಂಡಗಳನ್ನು ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ನಾವು ವಿಜಯ್ ದುಬೆ ಸೇರಿದಂತೆ ಆತನ ತಂಡದ ಎಲ್ಲರನ್ನೂ ಬಂಧಿಸಲಿದ್ದೇವೆ ಎಂದು ಕಾನ್ಪುರ ಐಜಿ ಮೋಹಿತ್ ಅಗರ್‌ವಾಲ್ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯ್ ದುಬೆ ಜತೆಗಿನ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ” ಎಂದು ಹೇಳಿದ್ದಾರೆ.
ಈ ಮಧ್ಯೆ, ಉತ್ತರ ಪ್ರದೇಶದ ಪೊಲೀಸ್ ಇಲಾಖೆ ವಿಜಯ್ ದುಬೆ ಬಗ್ಗೆ ಸುಳಿವು ಕೊಟ್ಟವರಿಗೆ 2.5 ಲಕ್ಷ ಬಹುಮಾನ ನೀಡುವುದಾಗಿ ಹೇಳಿದೆ. ವಿಜಯ್ ದುಬೆ ಪರಾರಿಯಾಗಿರುವ ಹಿನ್ನಲೆಯಲ್ಲಿ ಮಧ್ಯಪ್ರದೇಶದಲ್ಲಿಯೂ ಪೊಲೀಸರು ಎಚ್ಚರ ವಹಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯದೊಂದಿಗೆ ಗಡಿಗಳನ್ನು ಹಂಚಿಕೊಳ್ಳುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!