Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ 254 ಮಂದಿ ಸಾವು

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 254 ಮಂದಿ ಮೃತಪಟ್ಟಿದ್ದು, ನಿನ್ನೆ ರಾತ್ರಿಯಿಂದಲೇ 111 ಜನರನ್ನು ಕೊರೋನಾ ಬಲಿ ತೆಗೆದುಕೊಂಡಿದೆ.
ಇದೇ ಅವಧಿಯಲ್ಲಿ 2,958 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಾಂಕ್ರಾಮಿಕ ರೋಗ ಪೀಡಿತರ ಸಂಖ್ಯೆ 50,000 ಸಮೀಪದಲ್ಲಿದೆ. ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ಸರಾಸರಿ ಶೇ.28.71ಕ್ಕಿಂತ ಹೆಚ್ಚಾಗಿದ್ದು, ಸುಧಾರಣೆ ಕಂಡುಬಂದಿದ್ದರೂ, ಮತ್ತೊಂದೆಡೆ ದಿನನಿತ್ಯ ಮರಣ ಮತ್ತು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಲೇ ಇರುವುದು ಆತಂಕಕ್ಕೀಡುಮಾಡಿದೆ.
ದೇಶದ ವಿವಿಧೆಡೆ 24 ತಾಸುಗಳ ಅವಧಿಯಲ್ಲಿ (ನಿನ್ನೆ ರಾತ್ರಿವರೆಗೆ) ಒಟ್ಟು 252 ಜನರನ್ನ ಕೋವಿಡ್-19 ಸೋಂಕು ಬಲಿ ತೆಗೆದುಕೊಂಡಿದೆ. ನಿನ್ನೆ ರಾತ್ರಿಯಿಂದ ಬುಧವಾರ ಬೆಳಗ್ಗೆವರೆಗೆ 111 ಮಂದಿಯನ್ನು ಬಲಿ ಪಡೆದಿದೆ.
ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದ್ದು, ಒಟ್ಟು 617 ಸಾವುಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿ ಗುಜರಾತ್ (368), ಮಧ್ಯಪ್ರದೇಶ (176), ಪಶ್ಚಿಮ ಬಂಗಾಳ (140), ರಾಜಸ್ತಾನ (89), ದೆಹಲಿ (64), ಉತ್ತರ ಪ್ರದೇಶದ (56), ಆಂಧ್ರಪ್ರದೇಶ (36), ತಮಿಳುನಾಡು (33), ತೆಲಂಗಾಣ(30), ಕರ್ನಾಟಕ (29) ಹಾಗೂ ಪಂಜಾಬ್ (25) ರಾಜ್ಯಗಳಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎಂಟು, ಹರಿಯಾಣ ಆರು, ಕೇರಳ ಮತ್ತು ಬಿಹಾರದಲ್ಲಿ ತಲಾ ನಾಲ್ಕು,ಜಾರ್ಖಂಡ್ ಮೂರು, ಹಿಮಾಚಲ ಪ್ರದೇಶ ಎರಡು ಹಾಗೂ ಚಂಡೀಗಢ, ಮೇಘಾಲಯ, ಒಡಿಶಾ ಮತ್ತು ಅಸ್ಸಾಂ ರಾಜ್ಯಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!