Friday, January 21, 2022

ಶಾಲೆ ಆರಂಭವಾದ ಮೂರೇ ದಿನದಲ್ಲಿ 262 ಮಕ್ಕಳಿಗೆ ಕೊರೋನಾ

Follow Us

NEWSICS.COM
ಆಂಧ್ರಪ್ರದೇಶ: 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಆಂಧ್ರಪ್ರದೇಶದಲ್ಲಿ ನವೆಂಬರ್ 2 ರಂದು ಶಾಲೆಗಳನ್ನು ಪುನರಾರಂಭ ಮಾಡಲಾಗಿತ್ತು. ಪರಿಣಾಮ ಕಳೆದ ಮೂರು ದಿನಗಳಲ್ಲಿ 262 ವಿದ್ಯಾರ್ಥಿಗಳು ಮತ್ತು ಸುಮಾರು 160 ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಗುರುವಾರ (ನ.5)ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಆದರೂ ಸೋಂಕು ಹರಡಿದೆ ಎಂದರು.
ಇಲಾಖೆ ಒದಗಿಸಿದ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ 9 ಮತ್ತು 10 ನೇ ತರಗತಿಗೆ 9.75 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ, ಅದರಲ್ಲಿ 3.93 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 1.11 ಲಕ್ಷ ಶಿಕ್ಷಕರಲ್ಲಿ, 99,000 ಸಾವಿರಕ್ಕೂ ಹೆಚ್ಚು ಮಂದಿ ಶಿಕ್ಷಣ ಸಂಸ್ಥೆಗಳಿಗೆ ಬುಧವಾರ (ನ.4) ಹಾಜರಾಗಿದ್ದಾರೆ.
ಆನ್ಲೈನ್ ಶಿಕ್ಷಣ ನೀಡಲು ಬಡ ವಿದ್ಯಾರ್ಥಿಗಳಿಗೆ ಅದರ ಪ್ರಯೋಜನ ಪಡೆಯಲು ಸಾಧ್ಯವಿಲ್ಲ ಮತ್ತು ಬಾಲ್ಯ ವಿವಾಹ ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಸದ್ಯ‌ 9 ಮತ್ತು 10ನೇ ತರಗತಿ‌ ಮಕ್ಕಳಿಗೆ ಅರ್ಧ ದಿನ ಮಾತ್ರ ಶಾಲೆ ನಡೆಸಲಾಗುತ್ತಿದೆ.

ಟ್ರಂಪ್ ಹಿನ್ನಡೆ; ಅಮೆರಿಕದ ಹಲವೆಡೆ ಪ್ರತಿಭಟನೆ, ಹಿಂಸಾಚಾರ

ವಿಷಕಾರಿ ಮದ್ಯಸೇವಿಸಿ 20 ಮಂದಿ ಸಾವು

ಕೊವಿಡ್-19: ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ ನಿಷೇಧಕ್ಕೆ ಸುಪ್ರೀಂ ಆದೇಶ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!