Thursday, August 18, 2022

ಪ್ರಿಯತಮೆ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

Follow Us

newsics.com

ಮಹಾರಾಷ್ಟ್ರ : ಪ್ರೇಮಿಗಳಿಬ್ಬರು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಯುವಕ ಹೃದಯಾಘಾತದಲ್ಲಿ ಮೃತಪಟ್ಟ ವಿಚಿತ್ರ ಘಟನೆಯು ಮಹಾರಾಷ್ಟ್ರದ ನಾಗ್ಪುರದ ಸಾವೋನೆರ್​ ಲಾಡ್ಜ್​ನಲ್ಲಿ ಸಂಭವಿಸಿದೆ.

ವೃತ್ತಿಯಲ್ಲಿ ಚಾಲಕನಾಗಿದ್ದ 28 ವರ್ಷದ ಅಜಯ್​ ಪರ್ಟೆಕಿ ಮೃತಪಟ್ಟ ವ್ಯಕ್ತಿ. ಈತ ಕಳೆದ 3 ವರ್ಷಗಳಿಂದ ಮಧ್ಯ ಪ್ರದೇಶದ ಛಿಂದವಾಡದಲ್ಲಿ ನರ್ಸ್​ ಆಗಿದ್ದ 23 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇಬ್ಬರ ಮದುವೆ ಮಾಡುವ ಬಗ್ಗೆಯೂ ಮನೆಯಲ್ಲಿ ಮಾತುಕತೆ ನಡೆದಿತ್ತು.

ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಇಬ್ಬರು ಲಾಡ್ಜ್​ಗೆ ತೆರಳಿದ್ದಾರೆ. ಇಲ್ಲಿ ಖಾಸಗಿ ಕ್ಷಣಗಳನ್ನು ಕಳೆಯುತ್ತಿದ್ದ ಸಂದರ್ಭದಲ್ಲಿ ಅಜಯ್​ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಲಾಡ್ಜ್​ ಸಿಬ್ಬಂದಿ ಸಹಾಯದಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ವೈದ್ಯರು ಈತ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಾವೋನೆರ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲ್ಯಾಟ್ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!